2 Timothy 4:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚಳಿಗಾಲಕ್ಕೆ ಮುಂಚೆಯೇ ನನ್ನ ಬಳಿಗೆ ಬರಲು ನಿನ್ನಿಂದಾದಷ್ಟು ಪ್ರಯತ್ನಿಸು. ಯುಬೂಲ, ಪೊದೇಯ, ಲೀನ, ಕ್ಲೌದ್ಯ, ಇವರುಗಳು ಮತ್ತು ಇತರ ಸಹೋದರರೆಲ್ಲರೂ ನಿನಗೆ ವಂದನೆಗಳನ್ನು ಹೇಳಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಳಿಗಾಲಕ್ಕೆ ಮುಂಚೆಯೇ ಬರುವುದಕ್ಕೆ ಪ್ರಯತ್ನಿಸು. ಯುಬೂಲನು, ಪೊದೆಯನೂ, ಲೀನನೂ, ಕ್ಲೌದ್ಯಳೂ ಉಳಿದ ಸಹೋದರರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ.
Kannada BSI Bible 2016
ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನ ಮಾಡು. ಯುಬೂ ಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನಮಾಡು. ಯುಬೂಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಉಳಿದ ಸಹೋದರರೆಲ್ಲರೂ ನಿನಗೆ ವಂದನೆ ಹೇಳಿದ್ದಾರೆ.
Kannada Bible (KNCL) BSI 2016
ಚಳಿಗಾಲಕ್ಕೆ ಮೊದಲೇ ಇಲ್ಲಿಗೆ ಬರಲು ಪ್ರಯತ್ನಿಸು. ಯುಬೂಲ, ಫುದೇಯ, ಲೀನ, ಕ್ಲೌದ್ಯ ಇವರು ಮತ್ತು ಇತರ ಸಹೋದರರು ನಿನಗೆ ಶುಭಾಶಯಗಳನ್ನು ಕಳುಹಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಚಳಿಗಾಲಕ್ಕೆ ಮುಂಚೆಯೇ ಆದಷ್ಟು ಬೇಗನೆ ಬರುವುದಕ್ಕೆ ಪ್ರಯತ್ನ ಮಾಡು. ಯುಬೂಲನೂ ಪೊದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.