2 Timothy 4:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಸತ್ಯೋಪದೇಶವನ್ನು ಕೇಳದಿರುವ ಕಾಲವು ಬರಲಿದೆ. ಜನರು ತಮ್ಮನ್ನು ಮೆಚ್ಚಿಸುವಂಥ ಬೋಧಕರನ್ನು ಮತ್ತು ತಮ್ಮ ಕಿವಿಗೆ ಹಿತವೆನಿಸುವ ಬೋಧನೆಯನ್ನು ನೀಡುವ ಬೋಧಕರನ್ನು ಕಂಡುಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.
Kannada BSI Bible 2016
ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಗಳುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲರಾದ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.
Kannada Bible (KNCL) BSI 2016
ಜನರು ಸದ್ಬೋಧನೆಯನ್ನು ಸಹಿಸದೆ, ಸ್ವೇಚ್ಛಾಚಾರಿಗಳಾಗುವ ಕಾಲವು ಬರುತ್ತದೆ. ತಮ್ಮ ದುರಿಚ್ಛೆಗಳಿಗೆ ಅನುಗುಣವಾಗಿ ಬೋಧಿಸುವವರಿಗೆ ಕಾತರದಿಂದ ಕಿವಿಗೊಡಲು ಕೂಡಿಕೊಳ್ಳುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ. ಆದರೆ ಅವರು ತಮ್ಮ ಕಿವಿಗಳು ಕೇಳಲು ಆಶೆಪಡುವ ಅನೇಕ ಉಪದೇಶಕರನ್ನು ಕೂಡಿಟ್ಟುಕೊಳ್ಳುವರು.