2 Timothy 4:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.
Kannada BSI Bible 2016
ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗೆ ಸಿದ್ಧವಾಗಿದೆ; ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು; ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.
Kannada Bible (KNCL) BSI 2016
ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು.