3 John 1:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಬಂದಾಗ, ದಿಯೊತ್ರೇಫನು ಮಾಡುತ್ತಿರುವುದರ ಬಗ್ಗೆ ತಿಳಿಸುತ್ತೇನೆ. ಅವನು ನಮ್ಮನ್ನು ಕುರಿತು ಸುಳ್ಳನ್ನೂ ಕೆಟ್ಟ ಸಂಗತಿಗಳನ್ನೂ ಹೇಳುತ್ತಾನೆ. ಆದರೆ ಅಷ್ಟೇ ಅಲ್ಲ! ಕ್ರಿಸ್ತನ ಸೇವೆಮಾಡುತ್ತಿರುವ ಆ ಸಹೋದರರಿಗೆ ಸಹಾಯಮಾಡಲು ಅವನು ಒಪ್ಪುವುದಿಲ್ಲ. ಅಲ್ಲದೆ ಆ ಸಹೋದರರಿಗೆ ಸಹಾಯ ಮಾಡಲಿಚ್ಛಿಸುವ ಜನರನ್ನೂ ಅವನು ತಡೆಯುತ್ತಾನೆ. ಆ ಜನರು ಸಭೆಯನ್ನು ಬಿಟ್ಟುಹೋಗುವಂತೆ ಅವನು ಮಾಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ, ನಾನು ಅಲ್ಲಿಗೆ ಬಂದಾಗ ಅವನು ಮಾಡುವ ಕೃತ್ಯಗಳನ್ನು ಕುರಿತು ಎಲ್ಲರಿಗೂ ತಿಳಿಸುವೆನು. ಅವನು ಹರಟೆಕೊಚ್ಚುವವನಾಗಿ, ನಮ್ಮ ವಿಷಯದಲ್ಲಿ ಅಪ ಪ್ರಚಾರ ಮಾಡುತ್ತಿದ್ದಾನೆ. ಇದರ ಜೊತೆಗೆ ಯಾವ ಸಹೋದರರನ್ನು ಸೇರಿಸಿಕೊಳ್ಳುವುದಿಲ್ಲ ಹಾಗೂ ನಾನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ.
Kannada BSI Bible 2016
ಆದಕಾರಣ ನಾನು ಬಂದರೆ ಅವನು ಮಾಡುವ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಹರಟೆ ಕೊಚ್ಚುವವನಾಗಿ ನಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿ ರುವವರಿಗೆ ಅಡ್ಡಿ ಮಾಡುತ್ತಾ ತಾನೂ ಅವರನ್ನು ಸೇರಿಸಿಕೊಳ್ಳ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಹರಟೆಕೊಚ್ಚುವವನಾಗಿ ನಮ್ಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ತಾನು ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ. ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ ಒಳ್ಳೇ ನಡತೆಯನ್ನು ಅನುಸರಿಸು;
Kannada Bible (KNCL) BSI 2016
ನಾನು ಬಂದಾಗ, ಅವನು ಮಾಡುತ್ತಿರುವುದನ್ನೆಲ್ಲಾ ಹೊರಗೆಡಹುತ್ತೇನೆ. ನಮ್ಮ ವಿರುದ್ಧ ಅವನು ಅಪಪ್ರಚಾರ ಮಾಡುತ್ತಾ ಹರಟೆಕೊಚ್ಚುತ್ತಿದ್ದಾನೆ. ಸಾಲದೆಂದು, ಸಹೋದರರನ್ನು ಸ್ವಾಗತಿಸಲು ನಿರಾಕರಿಸುತ್ತಿದ್ದಾನೆ. ಹಾಗೆ ಸ್ವಾಗತಿಸಬಯಸುವವರನ್ನು ನಿರ್ಬಂಧಿಸಿ ಸಭೆಯಿಂದ ಬಹಿಷ್ಕರಿಸುತ್ತಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ನಾನು ಬಂದಾಗ ನಮ್ಮನ್ನು ದೂಷಿಸಿ ನಮ್ಮ ವಿಷಯದಲ್ಲಿ ಕೆಟ್ಟ ಕೆಟ್ಟ ಮಾತುಗಳನ್ನಾಡುವ ಅವನ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಇದರಲ್ಲಿ ತೃಪ್ತನಾಗದೆ, ಸಹೋದರರನ್ನು ತಾನೂ ಸೇರಿಸಿಕೊಳ್ಳದೆ, ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿ ಮಾಡುತ್ತಾ, ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಿದ್ದಾನೆ.