3 John 1:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇಮೇತ್ರಿಯನ ಬಗ್ಗೆ ಜನರೆಲ್ಲರೂ ಒಳ್ಳೆಯ ಸಂಗತಿಗಳನ್ನು ಹೇಳುತ್ತಾರೆ. ಅವರು ಹೇಳುವುದನ್ನು ಸತ್ಯವೂ ಅಂಗೀಕರಿಸುತ್ತದೆ. ಅವನನ್ನು ಕುರಿತು ನಾವೂ ಸಹ ಒಳ್ಳೆಯದನ್ನು ಹೇಳುತ್ತೇವೆ. ನಾವು ಹೇಳುವುದು ನಿಜವೆಂಬುದು ನಿನಗೆ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇಮೇತ್ರಿಯನು ಎಲ್ಲರಿಂದಲೂ, ಒಳ್ಳೆಯವನೆಂದು ಗುರುತಿಸಲ್ಪಟ್ಟಿದ್ದಾನೆ. ಅಲ್ಲದೆ ಸಾಕ್ಷಿಹೊಂದಿದವನಾಗಿದ್ದಾನೆ. ಅಷ್ಟೇ ಅಲ್ಲದೆ ನಾವು ಅವನ ಪರವಾಗಿ ಸಾಕ್ಷಿಕೊಡುತ್ತದೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲವನಾಗಿದ್ದೀಯ.
Kannada BSI Bible 2016
ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಸಹ ಅವನ ವಿಷಯದಲ್ಲಿ ಸಾಕ್ಷಿ ಹೇಳುವವರಾಗಿದ್ದೇವೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲೆ.
Kannada Bible (KNCL) BSI 2016
ದೆಮೇತ್ರಿಯನ ವಿಷಯದಲ್ಲಿ ಎಲ್ಲರೂ ಒಳ್ಳೆಯದನ್ನೇ ಹೇಳುತ್ತಾರೆ. ಸತ್ಯವೂ ಅವನ ಪರವಾಗಿದೆ. ನಾವು ಅವನ ಬಗ್ಗೆ ಸಾಕ್ಷಿ ಹೇಳಬಲ್ಲೆವು. ನಮ್ಮ ಸಾಕ್ಷ್ಯ ಸತ್ಯವೆಂದು ನೀನು ಬಲ್ಲೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಮೇತ್ರಿಯನನ್ನು ಕುರಿತಾಗಿ ಎಲ್ಲರೂ ಒಳ್ಳೆಯದನ್ನೇ ಮಾತನಾಡುತ್ತಾರೆ. ಅಷ್ಟೇ ಅಲ್ಲದೆ ಸತ್ಯವೇ ಅವನ ಪರವಾಗಿ ಸಾಕ್ಷಿಕೊಡುತ್ತದೆ. ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.