3 John 1:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕ್ರಿಸ್ತನಲ್ಲಿ ಸಹೋದರರಾದ ಕೆಲವರು ಬಂದು, ನಿನ್ನ ಜೀವನದಲ್ಲಿರುವ ಸತ್ಯವನ್ನು ನನಗೆ ತಿಳಿಸಿದರು. ನೀನು ಸತ್ಯಮಾರ್ಗದಲ್ಲಿ ನಡೆಯುತ್ತಿರುವೆ ಎಂಬುದನ್ನು ಅವರು ನನಗೆ ಹೇಳಿದರು. ಇದು ನನಗೆ ಬಹಳ ಸಂತೋಷವನ್ನು ಉಂಟುಮಾಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು, ನಿನ್ನಲ್ಲಿರುವ ಸತ್ಯವನ್ನು ಕುರಿತು ಮತ್ತು ನೀನು ಸತ್ಯವಂತನಾಗಿ ಜೀವಿಸುವವನು ಎಂದು ಹೇಳುವುದನ್ನು ಕೇಳುವಾಗ, ನಾನು ಬಹಳ ಸಂತೋಷಪಟ್ಟೆನು.
Kannada BSI Bible 2016
ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು ನಿನ್ನಲ್ಲಿರುವ ಸತ್ಯವನ್ನು ಕುರಿತು ತಿಳಿಸಿ ನೀನು ಸತ್ಯವಂತನಾಗಿ ನಡೆಯುವವನು ಎಂದು ಹೇಳುವಾಗ ನಾನು ಬಹಳ ಸಂತೋಷಪಡುತ್ತೇನೆ.
Kannada Bible (KNCL) BSI 2016
ನೀನು ಸತ್ಯದಲ್ಲಿ ನಿಷ್ಠಾವಂತನಾಗಿದ್ದು, ಸನ್ಮಾರ್ಗದಲ್ಲಿ ನಡೆಯುತ್ತಿರುವುದಾಗಿ ಕೆಲವು ಸಹೋದರರು ಇಲ್ಲಿಗೆ ಬಂದು ತಿಳಿಸಿದಾಗ ನನಗಾದ ಆನಂದ ಅಷ್ಟಿಷ್ಟಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನಲ್ಲಿ ಸತ್ಯಕ್ಕಾಗಿರುವ ನಂಬಿಗಸ್ತಿಕೆಯ ಕುರಿತು ಸಹೋದರರು ಬಂದು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು.