3 John 1:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಪ್ರಿಯ ಸ್ನೇಹಿತನೇ, ಕ್ರಿಸ್ತನಲ್ಲಿ ಸಹೋದರರಾದವರಿಗೆ ನೀನು ಸಹಾಯ ಮಾಡುತ್ತಿರುವುದು ಒಳ್ಳೆಯದೇ ಸರಿ. ನಿನಗೆ ಗೊತ್ತಿಲ್ಲದ ಸಹೋದರರಿಗೂ ನೀನು ಸಹಾಯ ಮಾಡುತ್ತಿರುವೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಿಯನೇ, ನೀನು ಸಹೋದರರಿಗೂ ಅದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ.
Kannada BSI Bible 2016
ಪ್ರಿಯನೇ, ಸಹೋದರರಿಗೂ ಪರಿಚಯವಿಲ್ಲದವ ರಿಗೂ ನೀನು ಮಾಡುವದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಿಯನೇ, ಪರಿಚಯವಿಲ್ಲದವರಾದ ಸಹೋದರರಿಗೂ ನೀನು ಸತ್ಕಾರವನ್ನು ಮಾಡುವದರಲ್ಲಿ ನಂಬುವವನಿಗೆ ಯೋಗ್ಯನಾಗಿ ನಡೆಯುತ್ತೀ.
Kannada Bible (KNCL) BSI 2016
ಪ್ರಿಯನೇ, ಸಹೋದರರಿಗೆ - ಮುಖ್ಯವಾಗಿ ಅಪರಿಚಿತರಿಗೆ ಸತ್ಕಾರ್ಯವನ್ನು ಮಾಡುವುದರಲ್ಲಿ ನೀನು ತುಂಬಾ ನಿಷ್ಠಾವಂತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯ ಸ್ನೇಹಿತನೇ, ಸಹೋದರರಿಗೂ ಪರಿಚಯವಿಲ್ಲದವರಿಗೂ ನೀನು ಮಾಡುವುದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.