3 John 1:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನಗಿರುವ ಪ್ರೀತಿಯನ್ನು ಕುರಿತು ಈ ಸಹೋದರರು ಸಭೆಗೆ ತಿಳಿಸಿದರು. ಅವರು ತಮ್ಮ ಪ್ರವಾಸವನ್ನು ಮುಂದುವರಿಸಲು ದಯವಿಟ್ಟು ಅವರಿಗೆ ಸಹಾಯಮಾಡು. ದೇವರಿಗೆ ಮೆಚ್ಚಿಗೆಕರವಾದ ರೀತಿಯಲ್ಲಿ ಅವರಿಗೆ ಸಹಾಯಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸಭೆಯ ಮುಂದೆ ನೀನು ತೋರಿಸಿದ ಪ್ರೀತಿಯ ಕುರಿತು ಸಾಕ್ಷಿ ಹೇಳಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು.
Kannada BSI Bible 2016
ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿಹೇಳಿದರು. ಅವರನ್ನು ನೀನು ದೇವರ ಸೇವಕರಿಗೆ ಯೋಗ್ಯವಾದ ರೀತಿಯಿಂದ ಸಾಗ ಕಳುಹಿಸಿದರೆ ಚೆನ್ನಾಗಿರುವದು.
Kannada Bible (KNCL) BSI 2016
ಇಲ್ಲಿಯ ಸಭೆಯ ಮುಂದೆ ಅವರೇ ನಿನ್ನ ಪ್ರೀತ್ಯಾದರವನ್ನು ಪ್ರಶಂಶಿಸಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ದೇವರು ಮೆಚ್ಚುವ ರೀತಿಯಲ್ಲಿ ಸಾಗಕಳುಹಿಸಿದರೆ ನೀನು ಒಳ್ಳೆಯದನ್ನು ಮಾಡುತ್ತೀ.