Acts 1:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಗಲಿಲಾಯದವರೇ, ಏಕೆ ಆಕಾಶವನ್ನೇ ನೋಡುತ್ತಾ ನಿಂತುಕೊಂಡಿದ್ದೀರಿ? ಯೇಸು ನಿಮ್ಮ ಕಣ್ಣೆದುರಿನಲ್ಲಿ ಪರಲೋಕಕ್ಕೆ ಹೇಗೆ ಏರಿ ಹೋದನೋ ಅದೇ ರೀತಿಯಲ್ಲಿ ಹಿಂತಿರುಗಿ ಬರುತ್ತಾನೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.
Kannada BSI Bible 2016
ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಕ್ಕೆ ಸೇರಿಸಲ್ಪಟ್ಟಿರುವ ಈ ಯೇಸು ಯಾವ ರೀತಿಯಲ್ಲಿ ಆಕಾಶದೊಳಕ್ಕೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
Kannada Bible (KNCL) BSI 2016
“ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತು ಇರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು,” ಎಂದು ಹೇಳಿದರು.