Acts 1:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅಪೊಸ್ತಲರು ಆಲಿವ್ ಮರಗಳ ಗುಡ್ಡದಿಂದ ಜೆರುಸಲೇಮಿಗೆ ಹಿಂತಿರುಗಿಹೋದರು. (ಈ ಗುಡ್ಡಕ್ಕೂ ಜೆರುಸಲೇಮಿಗೂ ಸುಮಾರು ಅರ್ಧ ಮೈಲಿ ಅಂತರವಿದೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.
Kannada BSI Bible 2016
ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರು ಎಣ್ಣೇಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಿಂದ ಯೆರೂಸಲೇವಿುಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇವಿುಗೂ ಸಬ್ಬತ್‍ದಿನದಲ್ಲಿ ಪ್ರಯಾಣಮಾಡುವಷ್ಟು ದೂರ.
Kannada Bible (KNCL) BSI 2016
ಅನಂತರ ಪ್ರೇಷಿತರು ಓಲಿವ್ ತೋಪಿನ ಗುಡ್ಡದಿಂದ ಸುಮಾರು ಒಂದು ಕಿಲೊಮೀಟರು ದೂರದಲ್ಲಿರುವ ಜೆರುಸಲೇಮಿಗೆ ಹಿಂದಿರುಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಅಪೊಸ್ತಲರು ಯೆರೂಸಲೇಮಿಗೆ ಸಮೀಪದಲ್ಲಿದ್ದ ಓಲಿವ್ ಗುಡ್ಡದಿಂದ ಇಳಿದು ಯೆರೂಸಲೇಮಿಗೆ ಹಿಂದಿರುಗಿ ಹೋದರು. ಅದು ಸಬ್ಬತ್ ದಿನದಲ್ಲಿ ಪ್ರಯಾಣ ಮಾಡುವಷ್ಟು ದೂರದಲ್ಲಿತ್ತು.