Acts 1:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಪೊಸ್ತಲರು ಪಟ್ಟಣವನ್ನು ಪ್ರವೇಶಿಸಿ ತಾವು ವಾಸವಾಗಿದ್ದಲ್ಲಿಗೆ ಹೋದರು. ಅದು ಮೇಲಂತಸ್ತಿನಲ್ಲಿತ್ತು. ಆ ಅಪೊಸ್ತಲರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಯಾಕೋಬ (ಅಲ್ಫಾಯನ ಮಗ), ದೇಶಾಭಿಮಾನಿಯಾದ ಸಿಮೋನ ಮತ್ತು ಯೂದ (ಯಾಕೋಬನ ಮಗ).
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.
Kannada BSI Bible 2016
ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅಲ್ಲಿಗೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿಗೆ ಹೋದರು; ಯಾರಾರಂದರೆ - ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ, ಯಾಕೋಬನ ಯೂದ, ಇವರೇ.
Kannada Bible (KNCL) BSI 2016
ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹಿಂದಿರುಗಿದಾಗ, ತಾವು ವಾಸಿಸುತ್ತಿದ್ದ ಮಾಳಿಗೆ ಮೇಲಿನ ಕೋಣೆಯೊಳಗೆ ಹೋದರು. ಅವರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ; ಫಿಲಿಪ್ಪ, ತೋಮ; ಬಾರ್ತೊಲೊಮಾಯ ಮತ್ತಾಯ; ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಸೀಮೋನ ಮತ್ತು ಯಾಕೋಬನ ಮಗ ಯೂದ.