Acts 1:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಪೊಸ್ತಲರೆಲ್ಲರೂ ಒಟ್ಟಾಗಿ ಸೇರಿದ್ದರು. ಅವರು ಒಂದೇ ಉದ್ದೇಶದಿಂದ ಎಡಬಿಡದೆ ಪ್ರಾರ್ಥಿಸುತ್ತಿದ್ದರು. ಕೆಲವು ಸ್ತ್ರೀಯರೂ ಯೇಸುವಿನ ತಾಯಿ ಮರಿಯಳೂ ಆತನ ಸಹೋದರರೂ ಅಪೊಸ್ತಲರ ಸಂಗಡವಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.
Kannada BSI Bible 2016
ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರೆಲ್ಲರು ಏಕಮನಸ್ಸಾಗಿ ದೇವರ ಪ್ರಾರ್ಥನೆಯಲ್ಲಿ ನಿರತರಾಗಿದ್ದರು. ಕೆಲವು ಮಂದಿ ಹೆಂಗಸರೂ ಯೇಸುವಿನ ತಾಯಿಯಾದ ಮರಿಯಳೂ ಆತನ ತಮ್ಮಂದಿರೂ ಅವರ ಸಂಗಡ ಇದ್ದರು.
Kannada Bible (KNCL) BSI 2016
ಅಲ್ಲಿ ಅವರು ಒಮ್ಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗುತ್ತಿದ್ದರು. ಕೆಲವು ಮಹಿಳೆಯರೂ ಯೇಸುವಿನ ತಾಯಿ ಮರಿಯಳೂ ಯೇಸುವಿನ ಸಹೋದರರೂ ಅವರೊಡನೆ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಕೆಲವು ಮಹಿಳೆಯರು, ಯೇಸುವಿನ ತಾಯಿ ಮರಿಯಳು, ಯೇಸುವಿನ ಸಹೋದರರು, ಇವರೆಲ್ಲರು ನಿತ್ಯವೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿ ಸೇರುತ್ತಿದ್ದರು.