Acts 1:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸಹೋದರರೇ, ಪವಿತ್ರಾತ್ಮನು ದಾವೀದನ ಮೂಲಕವಾಗಿ ಪವಿತ್ರ ಗ್ರಂಥದಲ್ಲಿ ಮುಂತಿಳಿಸಿದ್ದ ಸಂಗತಿ ನೆರವೇರಬೇಕಿತ್ತು. ನಮ್ಮ ಸ್ವಂತ ಗುಂಪಿನವರಲ್ಲಿ ಒಬ್ಬನಾದ ಯೂದನ ಬಗ್ಗೆ ದಾವೀದನು ಹೇಳಿದ್ದಾನೆ. ಯೂದನು ನಮ್ಮೊಂದಿಗೆ ಸೇವೆ ಮಾಡಿದನು. ಯೇಸುವನ್ನು ಬಂಧಿಸುವವರಿಗೆ ಯೂದನು ಮಾರ್ಗದರ್ಶಕನಾಗುತ್ತಾನೆಂದು ಪವಿತ್ರಾತ್ಮನು ತಿಳಿಸಿದ್ದನು.” (Verses 16-17)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.
Kannada BSI Bible 2016
ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ಯೇಸುವನ್ನು ಹಿಡಿದುಕೊಂಡವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವದು ಅವಶ್ಯವಾಗಿತ್ತು.
Kannada Bible (KNCL) BSI 2016
“ಪ್ರಿಯ ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ಮುಂದಾಳಾಗಿದ್ದವನು ಯೂದನು. ಅವನ ವಿಷಯವಾಗಿ ಪವಿತ್ರಾತ್ಮ ಅವರು ದಾವೀದನ ಮುಖಾಂತರ ಮುಂತಿಳಿಸಿದ ವಾಕ್ಯ ನೆರವೇರಲೇಬೇಕಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು.