Acts 1:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
(ಈ ಕಾರ್ಯ ಮಾಡುವುದಕ್ಕಾಗಿ ಯೂದನಿಗೆ ಹಣ ಕೊಡಲಾಗಿತ್ತು. ಆ ಹಣದಿಂದ ಒಂದು ಹೊಲವನ್ನು ಅವನಿಗಾಗಿ ಕೊಂಡುಕೊಳ್ಳಲಾಯಿತು. ಆದರೆ ಯೂದನು ತಲೆಕೆಳಗಾಗಿ ಬಿದ್ದಾಗ ಅವನ ಹೊಟ್ಟೆ ಒಡೆದುಹೋಯಿತು. ಅವನ ಕರುಳೆಲ್ಲಾ ಹೊರಗೆ ಬಂದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
(ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.
Kannada BSI Bible 2016
ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
(ಈ ಮನುಷ್ಯನು ತನ್ನ ದ್ರೋಹದಿಂದ ಸಂಪಾದಿಸಿದ ಹಣಕ್ಕೆ ಒಂದು ಹೊಲವನ್ನು ಕೊಂಡುಕೊಂಡನು; ಮತ್ತು ತಲೆಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಸುರಿದವು.
Kannada Bible (KNCL) BSI 2016
(\ಇವನು ತನ್ನ ನೀಚ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡ. ಆದರೆ ಅದರಲ್ಲೇ ಪ್ರಾಣ ಕಳೆದುಕೊಂಡ. ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತುಹೋದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೂದನು, ದ್ರೋಹ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡನು; ಅಲ್ಲಿಯೇ ಅವನು ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತನು.