Acts 1:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದ್ದರಿಂದ ಬೇರೊಬ್ಬನು ನಮ್ಮೊಂದಿಗೆ ಸೇರಿ, ಯೇಸುವಿನ ಪುನರುತ್ಥಾನಕ್ಕೆ ಸಾಕ್ಷಿಯಾಗಿರಬೇಕು. ಪ್ರಭುವಾದ ಯೇಸು ನಮ್ಮಲ್ಲಿ ಹೋಗುತ್ತಾ ಬರುತ್ತಾ ಇದ್ದ ಕಾಲವೆಲ್ಲಾ ಅವನು ನಮ್ಮ ಗುಂಪಿನಲ್ಲಿದ್ದವರಲ್ಲಿ ಒಬ್ಬನಾಗಿರಬೇಕು. ಯೋಹಾನನು ದೀಕ್ಷಾಸ್ನಾನ ಕೊಡಲು ಆರಂಭ ಮಾಡಿದ ದಿನದ ಮೊದಲುಗೊಂಡು ಯೇಸುವು ನಮ್ಮ ಬಳಿಯಿಂದ ಪರಲೋಕಕ್ಕೆ ಎತ್ತಲ್ಪಟ್ಟ ದಿನದವರೆಗೂ ಅವನು ನಮ್ಮೊಂದಿಗಿದ್ದವನಾಗಿರಬೇಕು.” (Verses 21-22)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು
Kannada BSI Bible 2016
ಆದಕಾರಣ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲದಲ್ಲೆಲ್ಲಾ ನಮ್ಮ ಸಂಗಡ ಇದ್ದ ಈ ಮನುಷ್ಯರಲ್ಲಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಮೇಲಣ ಲೋಕವನ್ನೇರಿದ ದಿನದವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿ ಹೇಳುವವನಾಗಬೇಕು ಅಂದನು.
Kannada Bible (KNCL) BSI 2016
“ಆದುದರಿಂದ ಪ್ರಭುಯೇಸುವಿನ ಪುನರುತ್ಥಾನಕ್ಕೆ ನಮ್ಮೊಡನೆ ಸಾಕ್ಷಿಯಾಗಿರಲು ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಸೇವಾಸಂಚಾರದಲ್ಲೆಲ್ಲಾ ನಮ್ಮೊಡನೆ ಇದ್ದವನಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ, ಕರ್ತ ಆಗಿರುವ ಯೇಸು ನಮ್ಮೊಂದಿಗೆ ಇದ್ದ ಕಾಲವೆಲ್ಲಾ ನಮ್ಮ ಜೊತೆಯಲ್ಲಿರುವ ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಎಲ್ಲಾ ಸೇವಾ ಸಂಚಾರದಲ್ಲಿಯೂ ನಮ್ಮೊಂದಿಗೆ ಇದ್ದವನಾಗಿರಬೇಕು,