Acts 1:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಪೊಸ್ತಲರು ಹೀಗೆ ಪ್ರಾರ್ಥಿಸಿದರು: “ಪ್ರಭುವೇ, ನೀನು ಎಲ್ಲಾ ಜನರ ಮನಸ್ಸುಗಳನ್ನು ತಿಳಿದಿರುವೆ. ಈ ಕೆಲಸವನ್ನು ಮಾಡುವುದಕ್ಕಾಗಿ ಈ ಇಬ್ಬರಲ್ಲಿ ನೀನು ಯಾರನ್ನು ಆರಿಸಿಕೊಂಡಿರುವೆ ಎಂಬುದನ್ನು ನಮಗೆ ತೋರಿಸು. ಯೂದನು ಈ ಕೆಲಸಕ್ಕೆ ವಿಮುಖನಾಗಿ ತಾನು ಸೇರಬೇಕಿದ್ದಲ್ಲಿಗೆ ಹೊರಟುಹೋದನು. ಪ್ರಭುವೇ, ಅವನ ಸ್ಥಳದಲ್ಲಿ ಅಪೊಸ್ತಲನಾಗಿ ಯಾರು ನೇಮಕಗೊಳ್ಳಬೇಕೆಂಬುದನ್ನು ನಮಗೆ ತೋರಿಸು!” (Verses 24-25)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.
Kannada BSI Bible 2016
ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ,
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೀಯನನ್ನೂ ನಿಲ್ಲಿಸಿ ಪ್ರಾರ್ಥನೆ ಮಾಡುತ್ತಾ - ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವದರಿಂದ ಆ ಸ್ಥಾನವನ್ನು ಹೊಂದುವದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿಕೊಂಡವನನ್ನು ತೋರಿಸಿಕೊಡು ಎಂದು ಹೇಳಿದರು.
Kannada Bible (KNCL) BSI 2016
ಅನಂತರ ಎಲ್ಲರೂ ಪ್ರಾರ್ಥನೆಮಾಡುತ್ತಾ, “ಸರ್ವೇಶ್ವರಾ, ನೀವು ಸರ್ವರ ಅಂತರಂಗಗಳನ್ನು ಅರಿತಿರುವಿರಿ. ಯೂದನು ತನ್ನ ಪ್ರೇಷಿತಸ್ಥಾನದಿಂದ ಭ್ರಷ್ಟನಾದ, ತನಗೆ ತಕ್ಕುದಾದ ಸ್ಥಳಕ್ಕೆ ತೆರಳಿದ. ಈ ಸೇವಾಸ್ಥಾನಕ್ಕೆ ಇವರಿಬ್ಬರಲ್ಲಿ ನೀವು ಆರಿಸಿದವನು ಯಾರೆಂದು ನಮಗೆ ತೋರಿಸಿರಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಅವರು, “ಕರ್ತ ಯೇಸುವೇ, ಪ್ರತಿಯೊಬ್ಬರ ಹೃದಯವನ್ನು ನೀವು ತಿಳಿದವರು. ಈ ಸೇವೆಯಿಂದ ಯೂದನು ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ,