Acts 1:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅಪೊಸ್ತಲರು ಅವರಿಬ್ಬರಲ್ಲಿ ಒಬ್ಬನನ್ನು ಆರಿಸಿಕೊಳ್ಳಲು ಚೀಟಿಹಾಕಿದರು. ಚೀಟಿ ಮತ್ತೀಯನಿಗೆ ಬಂದದ್ದರಿಂದ ಹನ್ನೊಂದು ಮಂದಿಯೊಂದಿಗೆ ಅವನೂ ಅಪೊಸ್ತಲನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.
Kannada BSI Bible 2016
ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವರಿಗೋಸ್ಕರ ಚೀಟುಹಾಕಿದರು. ಚೀಟು ಮತ್ತೀಯನಿಗೆ ಬಂದದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರ ಸಂಗಡ ಸೇರಿ ಎಣಿಸಲ್ಪಟ್ಟನು.
Kannada Bible (KNCL) BSI 2016
ಅನಂತರ ಚೀಟುಹಾಕಿದರು. ಅದು ಮತ್ತೀಯನ ಪರವಾಗಿತ್ತು. ಅವನನ್ನು ಹನ್ನೊಂದು ಮಂದಿಯೊಡನೆ ಪ್ರೇಷಿತಸ್ಥಾನಕ್ಕೆ ಸೇರಿಸಿಕೊಳ್ಳಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಅವರು ಚೀಟು ಹಾಕಲು, ಅದು ಮತ್ತೀಯನ ಪಾಲಿಗೆ ಬಂದಿತು; ಆದ್ದರಿಂದ ಅವನು ಹನ್ನೊಂದು ಜನ ಅಪೊಸ್ತಲರೊಂದಿಗೆ ಸೇರಿದನು.