Acts 1:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದು ಆತನ ಮರಣಾನಂತರ ನಡೆದ ಸಂಗತಿ. ತಾನು ಜೀವಂತವಾಗಿರುವುದನ್ನು ಆತನು ಅಪೊಸ್ತಲರಿಗೆ ತೋರ್ಪಡಿಸಿದನು ಮತ್ತು ಶಕ್ತಿಯುತವಾದ ಅನೇಕ ಕಾರ್ಯಗಳನ್ನು ಮಾಡುವುದರ ಮೂಲಕ ಅದನ್ನು ನಿರೂಪಿಸಿದನು. ಯೇಸು ಜೀವಂತವಾಗಿ ಎದ್ದುಬಂದ ನಂತರದ ನಲವತ್ತು ದಿನಗಳ ಅವಧಿಯಲ್ಲಿ ಅಪೊಸ್ತಲರು ಆತನನ್ನು ಅನೇಕ ಸಲ ನೋಡಿದರು. ಯೇಸು ದೇವರ ರಾಜ್ಯದ ಕುರಿತು ಅಪೊಸ್ತಲರೊಂದಿಗೆ ಮಾತಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.
Kannada BSI Bible 2016
ಆತನು ಶ್ರಮೆಯನ್ನನುಭವಿಸಿದ ಮೇಲೆ ದೃಢವಾದ ಅನೇಕ ಪ್ರಮಾಣಗಳಿಂದ ತಾನು ಜೀವಂತನಾಗಿ ದ್ದನೆಂದು ಅಪೊಸ್ತಲರಿಗೆ ತನ್ನನ್ನು ತೋರಿಸಿಕೊಂಡು ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮಾತನಾಡುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಬಾಧೆಪಟ್ಟು ಸತ್ತ ಮೇಲೆ ತನ್ನನ್ನು ಜೀವಂತನೆಂದು ಅನೇಕ ಪ್ರಮಾಣಗಳಿಂದ ಅಪೊಸ್ತಲರಿಗೆ ತೋರಿಸಿಕೊಂಡನು. ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವಾದ ಸಂಗತಿಗಳನ್ನು ಹೇಳುತ್ತಾ ಇದ್ದನು.
Kannada Bible (KNCL) BSI 2016
ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಬಾಧೆಪಟ್ಟು ಸತ್ತ ನಂತರ, ಅಪೊಸ್ತಲರಿಗೆ ಪ್ರತ್ಯಕ್ಷರಾಗುತ್ತಾ ತಾವು ಜೀವಂತವಾಗಿರುವುದನ್ನು ಅನೇಕ ನಿಶ್ಚಿತ ರುಜುವಾತುಗಳಿಂದ ತೋರಿಸಿಕೊಟ್ಟರು ಮತ್ತು ನಲವತ್ತು ದಿನಗಳ ಅವಧಿಯಲ್ಲಿ ಯೇಸು ಅವರಿಗೆ ಕಾಣಿಸಿಕೊಂಡು ದೇವರ ರಾಜ್ಯವನ್ನು ಕುರಿತು ತಿಳಿಸಿದರು.