Acts 1:5 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಹಾನನು ಜನರಿಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನವಾಗುವುದು” ಎಂದು ಆತನು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು” ಎಂದು ಅಪ್ಪಣೆ ಕೊಟ್ಟನು.
Kannada BSI Bible 2016
ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು.
Kannada Bible (KNCL) BSI 2016
ಏಕೆಂದರೆ, ಯೊವಾನ್ನನು ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದನು; ಆದರೆ ಇನ್ನು ಕೆಲವೇ ದಿನಗಳಲ್ಲಿ ನೀವು ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದನು. ಆದರೆ ಇನ್ನು ಕೆಲವೇ ದಿನಗಳಲ್ಲಿ ಪವಿತ್ರಾತ್ಮ ದೇವರಿಂದ ನೀವು ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು.