Acts 1:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಪೊಸ್ತಲರು ಒಟ್ಟಾಗಿ ಸೇರಿದ್ದಾಗ, ಅವರು ಯೇಸುವಿಗೆ, “ಪ್ರಭುವೇ, ನೀನು ಯೆಹೂದ್ಯರಿಗೆ ಮತ್ತೆ ಅವರ ರಾಜ್ಯವನ್ನು ಕೊಡುವಂಥದ್ದು ಈ ಕಾಲದಲ್ಲೋ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಿಬಂದವರು ಆತನನ್ನು,, “ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?” ಎಂದು ಕೇಳಲು
Kannada BSI Bible 2016
ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಿ ಬಂದವರು ಆತನನ್ನು - ಸ್ವಾಮೀ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ತಿರಿಗಿ ಸ್ಥಾಪಿಸಿಕೊಡುವಿಯೋ ಎಂದು ಕೇಳಲು
Kannada Bible (KNCL) BSI 2016
ಮತ್ತೊಮ್ಮೆ ಯೇಸುಸ್ವಾಮಿ ತಮ್ಮೊಡನೆ ಇದ್ದಾಗ ಪ್ರೇಷಿತರು, “ಪ್ರಭೂ, ನೀವು ಇದೀಗಲೇ ಇಸ್ರಯೇಲ್ ಜನರ ರಾಜ್ಯವನ್ನು ಪುನರ್‍ಸ್ಥಾಪಿಸುವಿರೋ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಷ್ಯರು ಯೇಸುವಿನ ಸಂಗಡ ಇದ್ದಾಗ, “ಸ್ವಾಮೀ, ಇಸ್ರಾಯೇಲರ ರಾಜ್ಯವನ್ನು ಈ ಕಾಲದಲ್ಲಿ ಪುನಃ ಸ್ಥಾಪಿಸುವಿಯೋ?” ಎಂದು ಪ್ರಶ್ನೆ ಮಾಡಿದರು.