Acts 1:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವರಿಗೆ, “ದಿನಗಳನ್ನು ಮತ್ತು ಕಾಲಗಳನ್ನು ನಿರ್ಧರಿಸುವ ಅಧಿಕಾರವಿರುವುದು ತಂದೆಯೊಬ್ಬನಿಗಷ್ಟೇ. ನೀವು ಅವುಗಳನ್ನು ತಿಳಿದುಕೊಳ್ಳಲಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರಿಗೆ, “ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.
Kannada BSI Bible 2016
ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರಿಗೆ - ತಂದೆಯು ಸ್ವಂತ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ ಸಮಯಗಳನ್ನೂ ತಿಳುಕೊಳ್ಳುವದು ನಿಮ್ಮ ಕೆಲಸವಲ್ಲ.
Kannada Bible (KNCL) BSI 2016
ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು: “ತಂದೆ ತಮ್ಮ ಸ್ವಂತ ಅಧಿಕಾರದಿಂದ ನೇಮಿಸಿದ ಸಮಯವನ್ನಾಗಲಿ, ಕಾಲವನ್ನಾಗಲಿ, ತಿಳಿಯುವುದು ನಿಮ್ಮ ಕೆಲಸವಲ್ಲ.