Acts 1:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಈ ಸಂಗತಿಗಳನ್ನು ಅಪೊಸ್ತಲರಿಗೆ ಹೇಳಿದ ಮೇಲೆ ಅಪೊಸ್ತಲರು ನೋಡುತ್ತಿರುವಾಗಲೇ ಆಕಾಶಕ್ಕೆ ಎತ್ತಲ್ಪಟ್ಟನು. ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರು ಆತನನ್ನು ಕಾಣಲಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.
Kannada BSI Bible 2016
ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮಾತುಗಳನ್ನು ಹೇಳಿದ ಬಳಿಕ ಅವರು ನೋಡುತ್ತಾ ಇದ್ದ ಹಾಗೆ ಆತನು ಏರಿಸಲ್ಪಟ್ಟನು; ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರ ಕಣ್ಣಿಗೆ ಮರೆಯಾದನು.
Kannada Bible (KNCL) BSI 2016
ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ಹೇಳಿದ ತರುವಾಯ, ಯೇಸು ಅವರ ಕಣ್ಣೆದುರಿನಲ್ಲಿಯೇ ಸ್ವರ್ಗಕ್ಕೆ ಏರಿಹೋದರು. ಮೋಡವು ಯೇಸುವನ್ನು ಅವರ ಕಣ್ಣಿಗೆ ಮರೆಮಾಡಿತು.