Acts 10:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತೆರೆದ ಆಕಾಶದಿಂದ ಯಾವುದೋ ಒಂದು ವಸ್ತು ಇಳಿದು ಬರುತ್ತಿರುವುದನ್ನು ಅವನು ಕಂಡನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗಗಳನ್ನು ಕಟ್ಟಿ ಭೂಮಿಯ ಮೇಲೆ ಇಳಿಯಬಿಡಲಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಧ್ಯಾನಪರವಶನಾಗಿ ಆಕಾಶವು ತೆರೆದಿರುವುದನ್ನೂ, ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವುದನ್ನೂ ಕಂಡನು.
Kannada BSI Bible 2016
ಆಕಾಶವು ತೆರೆದಿರುವದನ್ನೂ ಒಂದು ಪಾತ್ರೆ ಯಂತಿರುವ ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯು ಭೂಮಿಯ ಮೇಲೆ ಅವನ ಬಳಿಗೆ ಇಳಿಯುವದನ್ನೂ ಕಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಧ್ಯಾನ ಪರವಶನಾಗಿ ಆಕಾಶವು ತೆರೆದಿರುವದನ್ನೂ ನಾಲ್ಕು ಮೂಲೆಗಳನ್ನು ಹಿಡಿದಿದ್ದ ದೊಡ್ಡ ಜೋಳಿಗೆಯಂತಿರುವ ಏನೋ ಒಂದು ವಸ್ತುವು ಭೂವಿುಯ ಮೇಲೆ ಇಳಿಯುವದನ್ನೂ ಕಂಡನು.
Kannada Bible (KNCL) BSI 2016
ಸ್ವರ್ಗದ ಬಾಗಿಲು ತೆರೆಯಿತು. ದೊಡ್ಡ ದುಪ್ಪಟಿಯಂತಹ ವಸ್ತುವೊಂದು ಇಳಿದು ಬರುತ್ತಿತ್ತು. ಅದರ ನಾಲ್ಕು ಮೂಲೆಗಳನ್ನು ಹಿಡಿದು ಭೂಮಿಯ ಮೇಲೆ ಅದನ್ನು ಇಳಿಯಬಿಡಲಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರಲೋಕವು ತೆರೆಯಲಾಗಿ ನಾಲ್ಕು ಮೂಲೆಗಳನ್ನು ಹಿಡಿದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವದನ್ನು ಕಂಡನು.