Acts 10:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೇತ್ರನು ತಾನು ಕಂಡ ಈ ದರ್ಶನದ ಅರ್ಥವೇನಿರಬಹುದೆಂದು ಆಶ್ಚರ್ಯಗೊಂಡನು. ಅಷ್ಟರಲ್ಲಿಯೇ, ಕೊರ್ನೇಲಿಯನು ಕಳುಹಿಸಿದ್ದ ಜನರು ಸೀಮೋನನ ಮನೆಯನ್ನು ಕಂಡುಕೊಂಡಿದ್ದರು. ಅವರು ಬಾಗಿಲ ಬಳಿಯಲ್ಲಿ ನಿಂತುಕೊಂಡು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ, ಆಗೋ, ಕೊರ್ನೆಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವುದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು;
Kannada BSI Bible 2016
ಪೇತ್ರನು ತನಗಾದ ಈ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು
Kannada BSI JV (ಕನ್ನಡ ಸತ್ಯವೇದವು J.V. (BSI))
ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು -
Kannada Bible (KNCL) BSI 2016
ಇತ್ತ ಪೇತ್ರನು ತಾನು ಕಂಡ ದರ್ಶನದ ಅರ್ಥವೇನಿರಬಹುದೆಂದು ತಬ್ಬಿಬ್ಬಾದನು. ಅಷ್ಟರಲ್ಲಿ ಕೊರ್ನೇಲಿಯನು ಕಳುಹಿಸಿದ್ದ ಆಳುಗಳು ಸಿಮೋನನ ಮನೆಯನ್ನು ವಿಚಾರಿಸಿ ಕಂಡುಹಿಡಿದರು. ಹೊರಬಾಗಿಲ ಬಳಿ ನಿಂತುಕೊಂಡು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ದರ್ಶನದ ಅರ್ಥವೇನೆಂದು ಪೇತ್ರನು ಯೋಚಿಸುತ್ತಿರಲು, ಇಗೋ, ಕೊರ್ನೇಲ್ಯನು ಕಳುಹಿಸಿದ ಜನರು ಸೀಮೋನನ ಮನೆಯನ್ನು ಕಂಡುಕೊಂಡು ಅಲ್ಲಿ ದ್ವಾರದ ಬಳಿಯಲ್ಲಿ ನಿಂತಿದ್ದರು.