Acts 10:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೊರ್ನೇಲಿಯನು ದೈವಭಕ್ತನಾಗಿದ್ದನು. ಅವನು ಮತ್ತು ಅವನ ಕುಟುಂಬದಲ್ಲಿ ವಾಸವಾಗಿದ್ದ ಇತರ ಎಲ್ಲಾ ಜನರು ನಿಜದೇವರನ್ನು ಆರಾಧಿಸುತ್ತಿದ್ದರು. ಅವನು ಬಡವರಿಗೆ ಧಾರಾಳವಾಗಿ ಹಣವನ್ನು ಕೊಡುತ್ತಿದ್ದನು. ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.
Kannada BSI Bible 2016
ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನಧರ್ಮ ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
Kannada Bible (KNCL) BSI 2016
ಅವನೂ ಅವನ ಕುಟುಂಬವೂ ದೇವರಲ್ಲಿ ಭಯಭಕ್ತಿಯಿಂದ ಜೀವಿಸುತ್ತಿದ್ದರು. ಯೆಹೂದ್ಯರಿಗೆ ಅವನು - ಧಾರಾಳವಾಗಿ ದಾನಧರ್ಮಮಾಡುತ್ತಿದ್ದನು. ದೇವರಿಗೆ ತಪ್ಪದೆ ಪ್ರಾರ್ಥನೆ ಸಲ್ಲಿಸುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನೂ ಅವನ ಕುಟುಂಬದವರು ಭಕ್ತಿವಂತರೂ ದೇವರಿಗೆ ಭಯಪಡುವವರೂ ಆಗಿದ್ದರು. ಅವನು ಕೊರತೆಯಲ್ಲಿರುವವರಿಗೆ ಧಾರಾಳವಾಗಿ ಕೊಡುತ್ತಿದ್ದನು. ಅವನು ಅನುದಿನವೂ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದನು.