Acts 10:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೇತ್ರನು ಅವರನ್ನು ಒಳಗೆ ಕರೆದು, ಆ ರಾತ್ರಿ ಅಲ್ಲೇ ಇರಬೇಕೆಂದು ಕೇಳಿಕೊಂಡನು. ಮರುದಿನ ಪೇತ್ರನು ಸಿದ್ಧನಾಗಿ, ಆ ಮೂವರೊಂದಿಗೆ ಹೊರಟನು. ಜೊಪ್ಪದ ವಿಶ್ವಾಸಿಗಳಲ್ಲಿ ಕೆಲವರು ಅವನೊಂದಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೇತ್ರನು ಇದನ್ನು ಕೇಳಿ ಅವರನ್ನು ಒಳಕ್ಕೆ ಕರೆದು ಉಪಚರಿಸಿದನು. ಮರುದಿನ ಅವನು ಎದ್ದು ಅವರ ಜೊತೆಯಲ್ಲಿ ಹೊರಟನು; ಯೊಪ್ಪ ಪಟ್ಟಣದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.
Kannada BSI Bible 2016
ಆಗ ಪೇತ್ರನು ಅವರನ್ನು ಒಳಕ್ಕೆ ಕರೆದು ಸತ್ಕಾರ ಮಾಡಿದನು. ಮರುದಿನ ಅವನು ಎದ್ದು ಅವರ ಜೊತೆ ಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೇತ್ರನು ಇದನ್ನು ಕೇಳಿ ಅವರನ್ನು ಒಳಕ್ಕೆ ಕರೆದು ಉಪಚರಿಸಿದನು. ಮರುದಿನ ಅವನು ಎದ್ದು ಅವರ ಜೊತೆಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.
Kannada Bible (KNCL) BSI 2016
ಪೇತ್ರನು ಅವರನ್ನು ಒಳಕ್ಕೆ ಬರಮಾಡಿಕೊಂಡು ಉಪಚರಿಸಿ, ರಾತ್ರಿ ಅಲ್ಲೇ ತಂಗುವಂತೆ ಮಾಡಿದನು. ಮಾರನೆಯ ದಿನ ಪೇತ್ರನು ಅವರೊಡನೆ ಹೋದನು. ಜೊತೆಯಲ್ಲಿ ಜೊಪ್ಪದ ಕೆಲವು ಸಹೋದರರೂ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೇತ್ರನು ಅವರನ್ನು ತನ್ನ ಅತಿಥಿಗಳಾಗಿರಲು ಮನೆಯೊಳಗೆ ಕರೆದನು. ಮರುದಿನ ಪೇತ್ರನು ಅವರೊಂದಿಗೆ ಪ್ರಯಾಣ ಬೆಳೆಸಿದನು. ಯೊಪ್ಪದಲ್ಲಿಯ ಕೆಲವು ಸಹೋದರರು ಅವನೊಂದಿಗೆ ಹೊರಟರು.