Acts 10:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುದಿನ ಅವರು ಸೆಜರೇಯ ಪಟ್ಟಣವನ್ನು ತಲುಪಿದರು. ಕೊರ್ನೇಲಿಯನು ಅವರಿಗೋಸ್ಕರ ಕಾಯುತ್ತಿದ್ದನು. ಅವನು ತನ್ನ ಸಂಬಂಧಿಕರನ್ನು ಮತ್ತು ಆಪ್ತಸ್ನೇಹಿತರನ್ನು ಆಗಲೇ ತನ್ನ ಮನೆಗೆ ಆಹ್ವಾನಿಸಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ಅವನು ಕೈಸರೈಯಕ್ಕೆ ಬಂದು ಸೇರಿದನು. ಕೊರ್ನೆಲ್ಯನು ತನ್ನ ಬಂಧುಬಳಗದವರನ್ನೂ ಮತ್ತು ಅಪ್ತಮಿತ್ರರನ್ನೂ ಕರೆಯಿಸಿ ಪೇತ್ರನಿಗಾಗಿ ಎದುರುನೋಡುತ್ತಿದ್ದನು.
Kannada BSI Bible 2016
ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿನ ಅವನು ಕೈಸರೈಯಕ್ಕೆ ಸೇರಿದನು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಪ್ರಾಣವಿುತ್ರರನ್ನೂ ಕೂಡ ಕರಿಸಿ ಪೇತ್ರನನ್ನು ಎದುರುನೋಡುತ್ತಿದ್ದನು.
Kannada Bible (KNCL) BSI 2016
ಮರುದಿವಸ ಅವನು ಸೆಜರೇಯವನ್ನು ತಲುಪಿದನು. ಇತ್ತ ಕೊರ್ನೇಲಿಯನು ತಾನು ಆಹ್ವಾನಿಸಿದ ನೆಂಟರಿಷ್ಟರೊಡನೆ ಮತ್ತು ಆಪ್ತಮಿತ್ರರೊಡನೆ ಪೇತ್ರನಿಗಾಗಿ ಕಾಯುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುದಿನ ಅವನು ಕೈಸರೈಯವನ್ನು ತಲುಪಿದನು ಮತ್ತು ಕೊರ್ನೇಲ್ಯನು ಅವರಿಗಾಗಿ ಕಾಯುತ್ತಿದ್ದನು. ತನ್ನ ಬಂಧುಗಳನ್ನು ಹತ್ತಿರದ ಸ್ನೇಹಿತರನ್ನು ಕರೆಯಿಸಿದ್ದನು.