Acts 10:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೇತ್ರನು ಮನೆಯನ್ನು ಪ್ರವೇಶಿಸುತ್ತಿರಲು ಕೊರ್ನೇಲಿಯನು ಅವನನ್ನು ಎದುರುಗೊಂಡನು. ಕೊರ್ನೇಲಿಯನು ಪೇತ್ರನ ಪಾದಕ್ಕೆ ಅಡ್ಡಬಿದ್ದು ನಮಸ್ಕಾರ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೇತ್ರನು ಬಂದಾಗ ಕೊರ್ನೆಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು.
Kannada BSI Bible 2016
ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು.
Kannada Bible (KNCL) BSI 2016
ಪೇತ್ರನು ಮನೆಯನ್ನು ಪ್ರವೇಶಿಸುತ್ತಿದ್ದಂತೆ ಕೊರ್ನೇಲಿಯನು ಅವನನ್ನು ಎದುರುಗೊಂಡು, ಪಾದಕ್ಕೆರಗಿ, ಸಾಷ್ಟಾಂಗ ನಮಸ್ಕಾರಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪೇತ್ರನು ಮನೆಯಲ್ಲಿ ಪ್ರವೇಶಿಸುತ್ತಿದ್ದಂತೆ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಮುಂದೆ ಪಾದಕ್ಕೆರಗಿ ಸಾಷ್ಟಾಂಗ ನಮಸ್ಕಾರಮಾಡಿದನು.