Acts 10:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಜನರೊಂದಿಗೆ ಸಂಪರ್ಕವಿಟ್ಟುಕೊಳ್ಳುವುದಾಗಲಿ ಅವರನ್ನು ಭೇಟಿಮಾಡುವುದಾಗಲಿ ನಮ್ಮ ಯೆಹೂದ್ಯ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು ಎಂಬುದು ನಿಮಗೆ ಗೊತ್ತೇ ಇದೆ. ಆದರೆ ಯಾವ ವ್ಯಕ್ತಿಯನ್ನೂ ಅಪವಿತ್ರನೆಂದಾಗಲಿ ಅಶುದ್ಧನೆಂದಾಗಲಿ ಕರೆಯಕೂಡದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.
Kannada BSI Bible 2016
ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು ಅವರಿಗೆ - ಯೆಹೂದ್ಯರು ಅನ್ಯಜನರ ಕೂಡ ಹೊಕ್ಕು ಬಳಿಕೆಮಾಡುವದು ಯೆಹೂದ್ಯರ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರದೆಂದು ದೇವರು ತೋರಿಸಿದ್ದಾನೆ.
Kannada Bible (KNCL) BSI 2016
ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಧರ್ಮದವರೊಡನೆ ಸಂಪರ್ಕ ಇಟ್ಟುಕೊಳ್ಳುವುದು ಅಥವಾ ಅವರಿಗೆ ಭೇಟಿಕೊಡುವುದು ಧರ್ಮನಿಷಿದ್ಧ ಎಂಬುದು ನಿಮಗೆ ತಿಳಿದೇ ಇದೆ. ಆದರೆ, ನಾನು ಯಾರನ್ನೂ ಅಶುದ್ಧ ಅಥವಾ ಅಸ್ಪೃಶ್ಯ ಎನ್ನಬಾರದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೇತ್ರನು ಅವರಿಗೆ: “ಯೆಹೂದ್ಯನು ಯೆಹೂದ್ಯರಲ್ಲದವರೊಂದಿಗೆ ಸೇರಿ, ಅವರನ್ನು ಭೇಟಿ ಮಾಡುವುದಾಗಲಿ ನಮ್ಮ ಯೆಹೂದಿ ನಿಯಮಕ್ಕೆ ವಿರೋಧವಾದದ್ದು ಎಂದು ನಿಮಗೆಲ್ಲರಿರೂ ತಿಳಿದೇ ಇದೆ. ಆದರೆ ಯಾವ ಮನುಷ್ಯನನ್ನೂ ಅಶುದ್ಧನು ಇಲ್ಲವೆ ನಿಷಿದ್ಧವಾದವನು ಎಂದು ಕರೆಯಬಾರದು ಎಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.