Acts 10:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದು ಮಧ್ಯಾಹ್ನ ಸುಮಾರು ಮೂರು ಗಂಟೆಯಲ್ಲಿ ಕೊರ್ನೇಲಿಯನಿಗೆ ಒಂದು ದರ್ಶನವಾಯಿತು. ಅವನು ಅದನ್ನು ಸ್ಪಷ್ಟವಾಗಿ ಕಂಡನು. ಆ ದರ್ಶನದಲ್ಲಿ ದೇವದೂತನೊಬ್ಬನು ಅವನ ಬಳಿಗೆ ಬಂದು, “ಕೊರ್ನೇಲಿಯನೇ” ಎಂದು ಕರೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; “ಕೊರ್ನೆಲ್ಯನೇ” ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
Kannada BSI Bible 2016
ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಧ್ಯಾಹ್ನದ ಮೇಲೆ ಸುಮಾರು ಮೂರು ಗಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು - ಕೊರ್ನೇಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
Kannada Bible (KNCL) BSI 2016
ಅದೊಂದು ಮಧ್ಯಾಹ್ನ, ಸುಮಾರು ಮೂರು ಗಂಟೆಯ ಸಮಯ, ಅವನಿಗೊಂದು ದಿವ್ಯದರ್ಶನವಾಯಿತು: ದೇವದೂತನೊಬ್ಬನು ತನ್ನ ಮನೆಯೊಳಗೆ ಬಂದು, “ಕೊರ್ನೇಲಿಯಾ,” ಎಂದು ಕರೆಯುವುದನ್ನು ಸ್ಪಷ್ಟವಾಗಿ ಕಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ದಿನ ಮಧ್ಯಾಹ್ನ ಸುಮಾರು ಮೂರು ಗಂಟೆಯ ಸಮಯ ಅವನಿಗೆ ಒಂದು ದರ್ಶನವಾಯಿತು. ತನ್ನ ಬಳಿಗೆ ಒಬ್ಬ ದೇವದೂತನು ಬಂದು, “ಕೊರ್ನೇಲ್ಯನೇ!” ಎಂದು ಕರೆಯುವ ದೇವದೂತನನ್ನು ಸ್ಪಷ್ಟವಾಗಿ ಕಂಡನು.