Acts 10:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಕೊರ್ನೇಲಿಯನು, “ನಾಲ್ಕು ದಿನಗಳ ಹಿಂದೆ, ನಾನು ನನ್ನ ಮನೆಯಲ್ಲಿ ಪ್ರಾರ್ಥಿಸುತ್ತಿದ್ದೆನು. ಆಗ ಮಧ್ಯಾಹ್ನದ ಸುಮಾರು ಮೂರು ಗಂಟೆ ಸಮಯವಾಗಿತ್ತು. ಇದ್ದಕ್ಕಿದ್ದಂತೆ ಒಬ್ಬ ಮನುಷ್ಯನು ನನ್ನ ಮುಂದೆ ನಿಂತನು. ಅವನು ಧರಿಸಿಕೊಂಡಿದ್ದ ಬಟ್ಟೆಗಳು ಪ್ರಕಾಶಮಾನವಾಗಿ ಹೊಳೆಯುತ್ತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಕೊರ್ನೇಲ್ಯನು; “ನಾನು ನಾಲ್ಕು ದಿನಗಳ ಹಿಂದೆ ಇದೇ ಹೊತ್ತಿನಲ್ಲಿ ಮೂರನೇ ಗಳಿಗೆಯ ದೇವರ ಪ್ರಾರ್ಥನೆಯನ್ನು ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು;
Kannada BSI Bible 2016
ಅದಕ್ಕೆ ಕೊರ್ನೇಲ್ಯನು--ನಾನು ನಾಲ್ಕು ದಿನಗಳ ಹಿಂದೆ ಈ ಗಳಿಗೆಯವರೆಗೂ ಉಪವಾಸವಿದ್ದು ಒಂಭತ್ತನೆಯ ತಾಸಿನಲ್ಲಿ (ಮೂರು ಘಂಟೆಗೆ) ನನ್ನ ಮನೆಯಲ್ಲಿ ಪ್ರಾರ್ಥಿಸಿದಾಗ ಇಗೋ, ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತು ಕೊಂಡು--
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಕೊರ್ನೇಲ್ಯನು - ನಾನು ನಾಲ್ಕು ದಿವಸಗಳ ಹಿಂದೆ ಮಧ್ಯಾಹ್ನದ ಮೇಲೆ ಮೂರು ಗಂಟೆಗೆ ನಡೆಯತಕ್ಕ ದೇವರ ಪ್ರಾರ್ಥನೆಯನ್ನು ಇಷ್ಟು ಹೊತ್ತಿನವರೆಗೂ ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು -
Kannada Bible (KNCL) BSI 2016
ಆಗ ಕೊರ್ನೇಲಿಯನು, “ನಾನು ಮೂರು ದಿನಗಳ ಹಿಂದೆ ಮಧ್ಯಾಹ್ನ ಮೂರು ಗಂಟೆಯ ಇದೇ ಸಮಯದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದೆ. ಹಠಾತ್ತನೆ ಶೋಭಾಯಮಾನ ವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬನು ನನ್ನೆದುರಿಗೆ ನಿಂತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕೊರ್ನೇಲ್ಯನು, “ನಾಲ್ಕು ದಿನಗಳ ಹಿಂದೆ ಈ ಸಮಯದಲ್ಲಿ ಅಂದರೆ, ಮಧ್ಯಾಹ್ನ ಮೂರು ಗಂಟೆಯ ಸಮಯದಲ್ಲಿ ನಾನು ನನ್ನ ಮನೆಯಲ್ಲಿದ್ದುಕೊಂಡು ಪ್ರಾರ್ಥನೆ ಮಾಡುತ್ತಿದ್ದೆನು. ಆಗ ಫಕ್ಕನೆ ಹೊಳೆಯುತ್ತಿರುವ ವಸ್ತ್ರ ಧರಿಸಿದ್ದ ಒಬ್ಬನು ನನ್ನೆದುರು ಬಂದು ನಿಂತುಕೊಂಡನು.