Acts 10:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಕೆಲವು ಜನರನ್ನು ಜೊಪ್ಪಪಟ್ಟಣಕ್ಕೆ ಕಳುಹಿಸಿ ಸೀಮೋನ್ ಪೇತ್ರನನ್ನು ಬರಬೇಕೆಂದು ಕೇಳಿಕೊ. ಪೇತ್ರನು ಚರ್ಮಕಾರನಾದ ಸೀಮೋನ ಎಂಬವನ ಮನೆಯಲ್ಲಿ ಇಳಿದುಕೊಂಡಿದ್ದಾನೆ. ಅವನ ಮನೆಯು ಸಮುದ್ರ ತೀರದಲ್ಲಿದೆ’ ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಯಾರನ್ನಾದರು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು, ಅವನು ಚಮ್ಮಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರ ತೀರದ ಸಮೀಪವಿದೆ’ ಅಂದನು.
Kannada BSI Bible 2016
ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರಿಸಬೇಕು; ಅವನು ಚರ್ಮಕಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿ ಅದೆ ಅಂದನು.
Kannada Bible (KNCL) BSI 2016
ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾದ ಸಿಮೋನನನ್ನು ಬರಮಾಡಿಕೊ. ಅವನು ಸಮುದ್ರತೀರದಲ್ಲಿ ವಾಸಿಸುತ್ತಿರುವ, ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ತಂಗಿದ್ದಾನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೇತ್ರನೆಂದು ಹೆಸರಿನ ಸೀಮೋನನನ್ನು ಕರೆದುಕೊಂಡು ಬರಲು ಯೊಪ್ಪಕ್ಕೆ ಕೆಲವರನ್ನು ಕಳುಹಿಸು. ಪೇತ್ರನು ಸಮುದ್ರ ತೀರದಲ್ಲಿರುವ ಚರ್ಮಕಾರನಾದ ಸೀಮೋನನ ಮನೆಯಲ್ಲಿ ಇಳಿದುಕೊಂಡಿದ್ದಾನೆ,’ ಎಂದು ಹೇಳಿದನು.