Acts 10:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಜುದೇಯದಲ್ಲಿ ಮತ್ತು ಜೆರುಸಲೇಮಿನಲ್ಲಿ ಯೇಸು ಮಾಡಿದ ಎಲ್ಲಾ ಕಾರ್ಯಗಳನ್ನು ನಾವು ನೋಡಿದೆವು. ಆ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ. ಆದರೆ ಯೇಸು ಕೊಲ್ಲಲ್ಪಟ್ಟನು. ಅವರು ಆತನನ್ನು ಮರದ ಶಿಲುಬೆಗೆ ಏರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಯೆಹೂದ್ಯರ ಸೀಮೆಯಲ್ಲಿಯೂ, ಯೆರೂಸಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ.
Kannada BSI Bible 2016
ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸಲೇವಿುನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ.
Kannada Bible (KNCL) BSI 2016
ಅವರು ಯೆಹೂದ್ಯರ ಹಳ್ಳಿಪಳ್ಳಿಗಳಲ್ಲೂ ಜೆರುಸಲೇಮಿನಲ್ಲೂ ಎಸಗಿದ ಸಕಲ ಕಾರ್ಯಗಳಿಗೆ ನಾವು ಸಾಕ್ಷಿಗಳು. ಯೆಹೂದ್ಯರು ಆ ಯೇಸುವನ್ನು ಶಿಲುಬೆಮರಕ್ಕೆ ನೇತುಹಾಕಿ ಕೊಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೂದ್ಯರ ನಾಡಿನಲ್ಲಿ ಮತ್ತು ಯೆರೂಸಲೇಮ ಪಟ್ಟಣದಲ್ಲಿಯೂ ಯೇಸು ಮಾಡಿದ ಪ್ರತಿಯೊಂದಕ್ಕೂ ನಾವು ಸಾಕ್ಷಿಗಳು. ಮರದ ಕಂಬಕ್ಕೆ ತೂಗುಹಾಕಿ ಯೇಸುವನ್ನು ನಾಯಕರು ಕೊಂದುಹಾಕಿದರು,