Acts 10:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೊರ್ನೇಲಿಯನು ದೇವದೂತನನ್ನು ಕಂಡು ಭಯದಿಂದ “ಸ್ವಾಮೀ, ನಿಮಗೇನು ಬೇಕು?” ಎಂದು ಕೇಳಿದನು. ಆ ದೇವದೂತನು ಅವನಿಗೆ, “ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿದ್ದಾನೆ. ನೀನು ಬಡವರಿಗೆ ಕೊಟ್ಟವುಗಳನ್ನು ಆತನು ನೋಡಿದ್ದಾನೆ. ದೇವರು ನಿನ್ನನ್ನು ಮೆಚ್ಚಿಕೊಂಡಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.
Kannada BSI Bible 2016
ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ - ಏನು ಸ್ವಾಮೀ ಎಂದು ಕೇಳಲು ದೂತನು ಅವನಿಗೆ - ನಿನ್ನ ಪ್ರಾರ್ಥನೆಗಳೂ ನಿನ್ನ ದಾನಧರ್ಮಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಏರಿ ಬಂದವು.
Kannada Bible (KNCL) BSI 2016
ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.