Acts 10:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೇಸುವು ಎಲ್ಲಾ ಜನರಿಗೆ ಕಾಣಿಸಿಕೊಳ್ಳಲಿಲ್ಲ. ದೇವರಿಂದ ಮೊದಲೇ ಸಾಕ್ಷಿಗಳಾಗಿ ಆಯ್ಕೆಗೊಂಡಿದ್ದವರು ಮಾತ್ರ ಆತನನ್ನು ಕಂಡರು! ನಾವೇ ಆ ಸಾಕ್ಷಿಗಳು! ಯೇಸು ಜೀವಂತವಾಗಿ ಎದ್ದುಬಂದ ಮೇಲೆ ನಾವು ಆತನೊಂದಿಗೆ ಊಟ ಮಾಡಿದೆವು ಮತ್ತು ಪಾನ ಮಾಡಿದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು.
Kannada BSI Bible 2016
ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಪ್ರತ್ಯಕ್ಷನಾಗುವಂತೆ ಮಾಡಿದನು; ಆತನು ಎಲ್ಲರಿಗೆ ಪ್ರತ್ಯಕ್ಷನಾಗದೆ ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಅನ್ನಪಾನಗಳನ್ನು ತಕ್ಕೊಂಡೆವು.
Kannada Bible (KNCL) BSI 2016
ಅವರು ಕಾಣಿಸಿಕೊಂಡದ್ದು ಎಲ್ಲಾ ಜನರಿಗೆ ಅಲ್ಲ; ದೇವರಿಂದ ಸಾಕ್ಷಿಗಳಾಗಿ ಆಯ್ಕೆಯಾಗಿದ್ದ ನಮಗೆ. ಅವರು ಪುನರುತ್ಥಾನ ಹೊಂದಿದ ನಂತರ ಅವರೊಡನೆಯೇ ಊಟಮಾಡಿದವರು ನಾವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವನ್ನು ಎಲ್ಲರೂ ನೋಡಲಿಲ್ಲ. ಆದರೆ ದೇವರು ಮೊದಲೇ ನೇಮಿಸಿಕೊಂಡ ಸಾಕ್ಷಿಗಳಾಗಿರುವ ನಮಗೆ ಕಾಣಿಸಿಕೊಂಡರು. ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದು ಬಂದ ತರುವಾಯ ಅವರೊಡನೆ ಊಟ, ಪಾನಮಾಡಿದ ನಮಗೆ ಕಾಣಿಸಿಕೊಂಡರು.