Acts 10:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಜನರಿಗೆ ಬೋಧಿಸಬೇಕೆಂದು ಯೇಸು ನಮಗೆ ಹೇಳಿದನು. ಜೀವಂತವಾಗಿರುವ ಜನರಿಗೂ ಮತ್ತು ಸತ್ತುಹೋಗಿರುವ ಜನರಿಗೂ ದೇವರಿಂದ ನ್ಯಾಯಾಧಿಪತಿಯಾಗಿ ಆಯ್ಕೆಯಾಗಿರುವ ವ್ಯಕ್ತಿ ತಾನೇ ಎಂಬುದನ್ನು ಜನರಿಗೆ ತಿಳಿಸಬೇಕೆಂದು ಆತನು ನಮಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
Kannada BSI Bible 2016
ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬದನ್ನು ಜನರಿಗೆ ಸಾರಿ ಸಾಕ್ಷಿಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
Kannada Bible (KNCL) BSI 2016
ಮಾನವರಿಗೆ ಶುಭಸಂದೇಶವನ್ನು ಬೋಧಿಸುವಂತೆಯೂ ಜೀವಂತರಿಗೂ ಹಾಗೂ ಮೃತರಿಗೂ ದೇವರೇ ಅವರನ್ನು ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದಾರೆಂದು ರುಜುವಾತುಪಡಿಸುವಂತೆಯೂ ನಮಗೆ ಆಜ್ಞಾಪಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೀವಿಸುವವರಿಗೂ ಸತ್ತವರಿಗೂ ನ್ಯಾಯಾಧೀಶರಾಗಿ ದೇವರಿಂದ ನೇಮಕವಾದವರು ಯೇಸುವೇ ಎಂದು ನಾವು ಜನರಿಗೆ ಬೋಧಿಸಿ ಸಾಕ್ಷಿ ಕೊಡಬೇಕೆಂದೂ ಕ್ರಿಸ್ತ ಯೇಸು ನಮಗೆ ಆಜ್ಞಾಪಿಸಿದ್ದಾರೆ.