Acts 10:43 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನ ಪಾಪಗಳನ್ನು ದೇವರು ಯೇಸುವಿನ ಮೂಲಕ ಕ್ಷಮಿಸುವನು. ಇದು ಸತ್ಯವೆಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.
Kannada BSI Bible 2016
ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿಹೇಳಿದ್ದಾರೆ ಅಂದನು.
Kannada Bible (KNCL) BSI 2016
ಎಲ್ಲಾ ಪ್ರವಾದಿಗಳು ಅವರನ್ನು ಕುರಿತೇ ಸಾಕ್ಷಿ ನೀಡಿದ್ದಾರೆ; ಅವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನೂ ಅವರ ನಾಮದ ಶಕ್ತಿಯಿಂದ ಪಾಪಕ್ಷಮೆಯನ್ನು ಪಡೆಯುವನೆಂದು ಪ್ರವಾದನೆಮಾಡಿದ್ದಾರೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನಲ್ಲಿ ನಂಬಿಕೆಯನ್ನಿಡುವ ಪ್ರತಿಯೊಬ್ಬನು ಅವರ ಹೆಸರಿನ ಮುಖಾಂತರ ಪಾಪಗಳ ಕ್ಷಮಾಪಣೆ ಹೊಂದುವನು ಎಂದು ಅವರ ಬಗ್ಗೆ ಎಲ್ಲಾ ಪ್ರವಾದಿಗಳು ಸಾಕ್ಷಿಕೊಟ್ಟಿದ್ದಾರೆ,” ಎಂದನು.