Acts 10:46 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಬೇರಬೇರೆ ಭಾಷೆಗಳನ್ನು ಮಾತಾಡುತ್ತಾ ದೇವರಿಗೆ ಸ್ತೋತ್ರ ಸಲ್ಲಿಸುತ್ತಿರುವುದನ್ನು ಆ ಯೆಹೂದ್ಯ ವಿಶ್ವಾಸಿಗಳು ಕೇಳಿದರು. ಬಳಿಕ ಪೇತ್ರನು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನ್ಯಜನಗಳಿಗೂ ಪವಿತ್ರಾತ್ಮನ ದಾನವಾಯಿತಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು.
Kannada BSI Bible 2016
ಯಾಕಂದರೆ ಅವರು ಭಾಷೆಗಳನ್ನು ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಾ ಇದ್ದದ್ದನ್ನು ಅವರು ಕೇಳಿದರು. ಆಗ ಪೇತ್ರನು--
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವರು ಅನ್ಯಭಾಷೆಗಳಲ್ಲಿ ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಿದ್ದುದನ್ನು ಅವರು ಕೇಳಿಸಿಕೊಂಡರು, ಆಗ ಪೇತ್ರನು,