Acts 10:47 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳದಂತೆ ನಾವು ಈ ಜನರಿಗೆ ಅಡ್ಡಿಮಾಡಲು ಸಾಧ್ಯವಿಲ್ಲ. ನಾವು ಹೊಂದಿಕೊಂಡಂತೆ ಇವರೂ ಪವಿತ್ರಾತ್ಮನನ್ನು ಹೊಂದಿಕೊಂಡರು!” ಎಂದು ಹೇಳಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಡೆದ ಸಂಗತಿಯನ್ನು ಪೇತ್ರನು ನೋಡಿ; “ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ದೀಕ್ಷಾಸ್ನಾನವಾಗದಂತೆ ಅಡ್ಡಿಪಡಿಸುವವರು ಯಾರು?” ಎಂದು ಹೇಳಿ ಅವರಿಗೆ,
Kannada BSI Bible 2016
ನಮ್ಮ ಹಾಗೆಯೇ ಪವಿತ್ರಾತ್ಮನನ್ನು ಹೊಂದಿದ ಇವರಿಗೆ ನೀರಿನ ಬಾಪ್ತಿಸ್ಮವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ--ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ನೀರಿನ ದೀಕ್ಷಾಸ್ನಾನವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ
Kannada Bible (KNCL) BSI 2016
“ನಮ್ಮಂತೆಯೇ ಪವಿತ್ರಾತ್ಮ ಅವರನ್ನು ಪಡೆದಿರುವ ಈ ಜನರಿಗೆ ದೀಕ್ಷಾಸ್ನಾನ ಕೊಡಲು ಅಭ್ಯಂತರವಿದೆಯೇ?’ ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀರಿನಿಂದ ದೀಕ್ಷಾಸ್ನಾನವನ್ನು ಹೊಂದದಂತೆ ಯಾರಾದರೂ ಅಡ್ಡಿಮಾಡುವವರಿದ್ದಾರೋ? ನಾವು ಹೊಂದಿದಂತೆಯೇ ಇವರು ಸಹ ಪವಿತ್ರಾತ್ಮ ದೇವರನ್ನು ಹೊಂದಿಕೊಂಡಿದ್ದಾರಲ್ಲಾ?” ಎಂದು ಹೇಳಿದನು.