Acts 10:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೊರ್ನೇಲಿಯನೊಂದಿಗೆ ಮಾತಾಡಿದ ದೇವದೂತನು ಹೊರಟುಹೋದನು. ಬಳಿಕ ಕೊರ್ನೇಲಿಯನು ತನ್ನ ಸೇವಕರಲ್ಲಿ ಇಬ್ಬರನ್ನೂ ಒಬ್ಬ ಸೈನಿಕನನ್ನೂ ಕರೆದನು. ಈ ಸೈನಿಕನು ದೈವಭಕ್ತನಾಗಿದ್ದನು. ಕೊರ್ನೇಲಿಯನ ಆಪ್ತಸಹಾಯಕರಲ್ಲಿ ಇವನೂ ಒಬ್ಬನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೊರ್ನೇಲ್ಯನು ತನ್ನ ಸಂಗಡ ಮಾತನಾಡಿದ ದೇವದೂತನು ಹೊರಟುಹೋದ ಮೇಲೆ, ತನ್ನ ಮನೆಯಲ್ಲಿದ್ದ ಸೇವಕರಲ್ಲಿ ಇಬ್ಬರನ್ನೂ ಮತ್ತು ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೈವಭಕ್ತನನ್ನೂ ಕರೆದು,
Kannada BSI Bible 2016
ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು
Kannada BSI JV (ಕನ್ನಡ ಸತ್ಯವೇದವು J.V. (BSI))
ಕೊರ್ನೇಲ್ಯನು ತನ್ನ ಸಂಗಡ ಮಾತಾಡಿದ ದೇವದೂತನು ಹೊರಟುಹೋದ ಮೇಲೆ ತನ್ನ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೇವಭಕ್ತನನ್ನೂ ಕರೆದು
Kannada Bible (KNCL) BSI 2016
ಕೂಡಲೇ ಕೊರ್ನೇಲಿಯನು ತನ್ನ ಇಬ್ಬರು ಪರಿಚಾರಕರನ್ನೂ ತನ್ನ ಪಹರೆಯವರಲ್ಲಿ ಧರ್ಮನಿಷ್ಠನಾಗಿದ್ದ ಒಬ್ಬ ಸೈನಿಕನನ್ನೂ ಕರೆದು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನೊಂದಿಗೆ ಮಾತನಾಡಿದ ದೇವದೂತನು ಅದೃಶ್ಯವಾದ ಮೇಲೆ ಕೊರ್ನೇಲ್ಯನು ತನ್ನ ಇಬ್ಬರು ಸೇವಕರನ್ನು ಮತ್ತು ತನ್ನ ಪರಿಚಾರಕರಲ್ಲಿ ಭಕ್ತಿವಂತನಾದ ಒಬ್ಬ ಸಿಪಾಯಿಯನ್ನು ಕರೆದು,