Acts 10:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುದಿನ ಈ ಜನರು ಜೊಪ್ಪಕ್ಕೆ ಸಮೀಪಿಸಿದಾಗ ಮಧ್ಯಾಹ್ನದ ಸಮಯವಾಗಿತ್ತು. ಆ ಸಮಯದಲ್ಲಿ ಪೇತ್ರನು ಪ್ರಾರ್ಥಿಸುವುದಕ್ಕಾಗಿ ಮಾಳಿಗೆಯ ಮೇಲೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ಅವರು ಪ್ರಯಾಣಮಾಡಿ ಆ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು.
Kannada BSI Bible 2016
ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನದಲ್ಲಿ ಪ್ರಾರ್ಥನೆ ಮಾಡುವದಕ್ಕಾಗಿ ಮಾಳಿಗೆಯನ್ನು ಹತ್ತಿದನು.
Kannada Bible (KNCL) BSI 2016
ಮಾರನೆಯ ದಿನ ಅವರು ಪ್ರಯಾಣ ಮಾಡಿ ಜೊಪ್ಪವನ್ನು ಸಮೀಪಿಸಿದಾಗ ಮಧ್ಯಾಹ್ನ ಸಮಯ. ಆಗತಾನೇ ಪೇತ್ರನು ಪ್ರಾರ್ಥನೆ ಮಾಡಲು ಮಾಳಿಗೆಯ ಮೇಲಕ್ಕೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾರನೆಯ ದಿನ ಅವರು ಪ್ರಯಾಣಮಾಡಿ ಮಧ್ಯಾಹ್ನದ ಸಮಯ ಯೊಪ್ಪ ಪಟ್ಟಣವನ್ನು ಸಮೀಪಿಸುತ್ತಿದ್ದಾಗ, ಆಗತಾನೇ ಪೇತ್ರನು ಪ್ರಾರ್ಥಿಸಲು ಮಾಳಿಗೆಯ ಮೇಲಕ್ಕೆ ಹೋದನು.