Acts 11:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಂದೇಹಪಡದೆ ಅವರೊಂದಿಗೆ ಹೋಗಬೇಕೆಂದು ಪವಿತ್ರಾತ್ಮನು ನನಗೆ ಹೇಳಿದನು. ಇಲ್ಲಿರುವ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು. ನಾವು ಕೊರ್ನೇಲಿಯನ ಮನೆಗೆ ಹೋದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರಾತ್ಮನು, ನನಗೆ ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.
Kannada BSI Bible 2016
ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರಾತ್ಮನು - ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ನನಗೆ ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.
Kannada Bible (KNCL) BSI 2016
ನಾನು ಸಂಕೋಚಪಡದೆ ಅವರೊಡನೆ ಹೋಗಬೇಕೆಂದು ಪವಿತ್ರಾತ್ಮ ತಿಳಿಸಿದರು. ಜೊಪ್ಪದ ಈ ಆರುಮಂದಿ ಭಕ್ತರೂ ನನ್ನೊಡನೆ ಸೆಜರೇಯಕ್ಕೆ ಬಂದರು. ನಾವೆಲ್ಲರೂ ಕೊರ್ನೇಲಿಯನ ಮನೆಯನ್ನು ಪ್ರವೇಶಿಸಿದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏನೂ ಸಂಶಯಪಡದೇ ಅವರ ಜೊತೆಯಲ್ಲಿ ಹೋಗಬೇಕೆಂದು ಪವಿತ್ರಾತ್ಮ ದೇವರು ನನಗೆ ಅಪ್ಪಣೆಕೊಟ್ಟರು. ಇದಲ್ಲದೆ ಈ ಆರು ಜನ ಸಹೋದರರೂ ನನ್ನೊಂದಿಗೆ ಹೊರಟರು. ನಾವು ಆ ಮನುಷ್ಯನ ಮನೆಯೊಳಗೆ ಪ್ರವೇಶಿಸಿದೆವು.