Acts 11:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ಮನೆಯಲ್ಲಿ ದೇವದೂತನೊಬ್ಬನು ನಿಂತಿರುವುದನ್ನು ತಾನು ಕಂಡದ್ದರ ಬಗ್ಗೆ ಕೊರ್ನೇಲಿಯನು ನನಗೆ ಹೇಳಿದನು. ಆ ದೇವದೂತನು ಕೊರ್ನೇಲಿಯನಿಗೆ, ‘ಕೆಲವು ಜನರನ್ನು ಜೊಪ್ಪಕ್ಕೆ ಕಳುಹಿಸು. ಸೀಮೋನ್ ಪೇತ್ರನನ್ನು ಆಹ್ವಾನಿಸಿ ನಿಮ್ಮ ಬಳಿಗೆ ಬರಮಾಡಿಕೊ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮನುಷ್ಯನ ಮನೆಯೊಳಗೆ ನಾವು ಸೇರಲು ಅವನು ನಮಗೆ, ಒಬ್ಬ ದೇವದೂತನು ನನ್ನ ಮನೆಯಲ್ಲಿ ನಿಂತಿರುವುದನ್ನು ಕಂಡೆನು. ಆ ದೂತನು; “ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು.
Kannada BSI Bible 2016
ಅವನು ತನ್ನ ಮನೆಯಲ್ಲಿ ಒಬ್ಬ ದೂತನನ್ನು ಕಂಡನೆಂದು ನಮಗೆ ತಿಳಿಸಿದನು. ಆ ದೂತನು ಅವನಿಗೆ--ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು;
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮನುಷ್ಯನ ಮನೆಯೊಳಗೆ ನಾವು ಸೇರಲು ಅವನು ನಮಗೆ - ಒಬ್ಬ ದೇವದೂತನು ನನ್ನ ಮನೆಯಲ್ಲಿ ನಿಂತಿರುವದನ್ನು ಕಂಡೆನು. ಆ ದೂತನು - ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರಿಸು;
Kannada Bible (KNCL) BSI 2016
ಅವನು, “ನನ್ನ ಮನೆಯಲ್ಲೇ ದೂತನೊಬ್ಬನು ಕಾಣಿಸಿಕೊಂಡು, ‘ಈಗಲೇ ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾಗುವ ಸಿಮೋನನನ್ನು ಬರಹೇಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಮನೆಯಲ್ಲಿ ಒಬ್ಬ ದೇವದೂತನು ಪ್ರತ್ಯಕ್ಷನಾಗಿ, ‘ಪೇತ್ರ ಎಂದು ಕರೆಯಲಾಗುವ ಸೀಮೋನನನ್ನು ಯೊಪ್ಪದಿಂದ ಕರೆಕಳುಹಿಸು.