Acts 11:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ನಿಮ್ಮೊಂದಿಗೆ ಮಾತಾಡುವನು. ಅವನು ಹೇಳುವ ಸಂಗತಿಗಳು ನಿನ್ನನ್ನೂ ನಿನ್ನ ಕುಟಂಬದವರನ್ನೂ ರಕ್ಷಿಸುತ್ತವೆ’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು” ಎಂದು ಹೇಳಿದನೆಂಬುದಾಗಿ ತಿಳಿಸಿದನು.
Kannada BSI Bible 2016
ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನಿನಗೆ ಕೆಲವು ಮಾತುಗಳನ್ನು ಹೇಳುವನು, ಆ ಮಾತುಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.
Kannada Bible (KNCL) BSI 2016
ಅವನು ನೀನೂ ನಿನ್ನ ಕುಟುಂಬದವರೆಲ್ಲರೂ ಪಡೆಯಬಹುದಾದಂಥ ಜೀವೋದ್ಧಾರದ ಸಂದೇಶವನ್ನು ನೀಡುವನು,’ ಎಂದು ತಿಳಿಸಿದನು” ಎಂದು ನಮಗೆ ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಕೊಡುವ ವಾಕ್ಯದ ಮೂಲಕ ನೀನೂ ನಿನ್ನ ಮನೆಯಲ್ಲಿರುವವರೆಲ್ಲರೂ ರಕ್ಷಣೆ ಹೊಂದುವಿರಿ,’ ಎಂದು ಹೇಳಿದ್ದನ್ನು ಅವನು ನಮಗೆ ವಿವರಿಸಿದನು.