Acts 11:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾನು ಪ್ರಭುವಿನ ಮಾತುಗಳನ್ನು ಜ್ಞಾಪಿಸಿಕೊಂಡೆನು. ‘ಯೋಹಾನನು ಜನರಿಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ಆದರೆ ನೀವು ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಪಡೆಯುವಿರಿ!’ ಎಂದು ಪ್ರಭುವು ಹೇಳಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ; “ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು” ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು.
Kannada BSI Bible 2016
ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ - ಯೋಹಾನನಂತೂ ನೀರಿನ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮದಲ್ಲಿ ಸ್ನಾನವಾಗುವದು ಎಂದು ಯೇಸುಸ್ವಾವಿು ಹೇಳಿದ ಮಾತು ನನ್ನ ನೆನಪಿಗೆ ಬಂತು.
Kannada Bible (KNCL) BSI 2016
ಆಗ ನನಗೆ, ‘ಯೊವಾನ್ನನು ನೀರಿನಿಂದ ಸ್ನಾನದೀಕ್ಷೆಯನ್ನು ಕೊಟ್ಟನು. ನೀವಾದರೋ ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನವನ್ನು ಪಡೆಯುವಿರಿ,’ ಎಂಬ ಪ್ರಭುವಿನ ಮಾತುಗಳು ನೆನಪಿಗೆ ಬಂದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಯೋಹಾನನು ನೀರಿನಿಂದ ದೀಕ್ಷಾಸ್ನಾನ ಮಾಡಿಸಿದ್ದಾನೆ. ನೀವಾದರೋ ಪವಿತ್ರಾತ್ಮ ದೇವರಿಂದ ದೀಕ್ಷಾಸ್ನಾನ ಹೊಂದುವಿರಿ,’ ಎಂದು ಕರ್ತ ಯೇಸುವು ಹೇಳಿದ ಮಾತುಗಳನ್ನು ನಾನು ಆಗ ಜ್ಞಾಪಿಸಿಕೊಂಡೆನು.