Acts 11:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರವನ್ನೇ ದೇವರು ಈ ಜನರಿಗೆ ಕೊಟ್ಟನು. ಹೀಗಿರಲು ನಾನು ದೇವರ ಕೆಲಸವನ್ನು ನಿಲ್ಲಿಸಲು ಸಾಧ್ಯವಿರಲಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು.
Kannada BSI Bible 2016
ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಶಕ್ತನೋ?
Kannada Bible (KNCL) BSI 2016
ನಾನುಪ್ರಭು ಯೇಸುಕ್ರಿಸ್ತರನ್ನು ವಿಶ್ವಾಸಿಸಿದಾಗ ನಮಗೆ ಕೊಟ್ಟ ವರವನ್ನೇ ದೇವರು ಆ ಅನ್ಯಧರ್ಮದವರಿಗೂ ಕೊಟ್ಟಿರುವರು. ಹೀಗಿರುವಲ್ಲಿ ದೇವರನ್ನು ತಡೆಗಟ್ಟಲು ನಾನಾರು?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಂಬಿಕೆಯನ್ನಿಟ್ಟ ನಮಗೆ ಕೊಟ್ಟ ಪವಿತ್ರಾತ್ಮ ವರವನ್ನೇ ದೇವರು ಅವರಿಗೂ ಕೊಟ್ಟಿರಲು, ದೇವರಿಗೆ ಅಡ್ಡಿಮಾಡಲು ನಾನು ಯಾರು?” ಎಂದನು.