Acts 11:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
Kannada BSI Bible 2016
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆಂದ ಮಾತುಗಳನ್ನು ಆ ಸುನ್ನತಿಯವರು ಕೇಳಿ ಆಕ್ಷೇಪಣೆ ಮಾಡುವದನ್ನು ಬಿಟ್ಟು - ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ ಎಂದು ದೇವರನ್ನು ಕೊಂಡಾಡಿದರು.
Kannada Bible (KNCL) BSI 2016
ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದಿ ವಿಶ್ವಾಸಿಗಳು ಇದನ್ನು ಕೇಳಿದಾಗ, ಅವರಿಗೆ ಯಾವ ಆಕ್ಷೇಪಣೆಯೂ ಇರಲಿಲ್ಲ. ಹಾಗಾದರೆ ದೇವರು, “ಯೆಹೂದ್ಯರಲ್ಲದವರಿಗೂ ಸಹ ಜೀವಕ್ಕಾಗಿ ಪಶ್ಚಾತ್ತಾಪವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ದೇವರನ್ನು ಕೊಂಡಾಡಿದರು.