Acts 11:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸ್ತೆಫನನು ಕೊಲ್ಲಲ್ಪಟ್ಟ ನಂತರ ಉಂಟಾದ ಹಿಂಸೆಯಿಂದಾಗಿ ವಿಶ್ವಾಸಿಗಳು ಚದರಿಹೋದರು. ವಿಶ್ವಾಸಿಗಳಲ್ಲಿ ಕೆಲವರು ಬಹು ದೂರದ ಸ್ಥಳಗಳಾದ ಫೆನಿಷ್ಯ, ಸೈಪ್ರಸ್ ಮತ್ತು ಅಂತಿಯೋಕ್ಯಗಳಿಗೆ ಹೋದರು. ವಿಶ್ವಾಸಿಗಳು ಈ ಸ್ಥಳಗಳಲ್ಲಿ ಸುವಾರ್ತೆಯನ್ನು ತಿಳಿಸಿದರು. ಆದರೆ ಅವರು ಯೆಹೂದ್ಯರಿಗೆ ಮಾತ್ರ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.
Kannada BSI Bible 2016
ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗೇ ಹೊರತು ಮತ್ತಾರಿಗೂ ವಾಕ್ಯವನ್ನು ಹೇಳದೆ ಫೊಯಿನಿಕೆ ಕುಪ್ರ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.
Kannada Bible (KNCL) BSI 2016
ಸ್ತೇಫನನು ಕೊಲೆಯಾದ ಮೊದಲ್ಗೊಂಡು ಉಂಟಾದ ಹಿಂಸಾಚಾರದ ನಿಮಿತ್ತ ಭಕ್ತಾದಿಗಳು ಚದರಿಹೋದರು. ಅವರಲ್ಲಿ ಕೆಲವರು ಫೆನಿಷ್ಯ, ಸೈಪ್ರಸ್, ಅಂತಿಯೋಕ್ಯದವರೆಗೂ ಹೋಗಿ ಶುಭಸಂದೇಶವನ್ನು ಸಾರಿದರು. ಆದರೆ ಇದನ್ನು ಸಾರಿದ್ದು ಯೆಹೂದ್ಯರಿಗೆ ಮಾತ್ರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸ್ತೆಫನನ ಮರಣದ ನಂತರ ಸಂಭವಿಸಿದ ಹಿಂಸೆಯ ನಿಮಿತ್ತ ಚದರಿಹೋದವರು ಫೊಯಿನಿಕೆ, ಸೈಪ್ರಸ್ ಮತ್ತು ಅಂತಿಯೋಕ್ಯದವರೆಗೆ ಪ್ರಯಾಣಮಾಡಿದರು. ಹೀಗೆ ಅವರು ಯೆಹೂದ್ಯರಿಗೆ ಮಾತ್ರವೇ ವಾಕ್ಯವನ್ನು ಸಾರಿದರು.