Acts 11:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ವಿಶ್ವಾಸಿಗಳಲ್ಲಿ ಕೆಲವರು ಸೈಪ್ರಸ್ ಮತ್ತು ಸಿರೇನ್ ಸ್ಥಳಗಳವರಾಗಿದ್ದರು. ಈ ಜನರು ಅಂತಿಯೋಕ್ಯಕ್ಕೆ ಬಂದಾಗ ಅವರು, ಪ್ರಭುವಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅಲ್ಲಿಯ ಗ್ರೀಕ್ ಜನರಿಗೆ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.
Kannada BSI Bible 2016
ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಕುಪ್ರದ್ವೀಪದವರು ಕೆಲವರೂ ಕುರೇನ್ಯದವರು ಕೆಲವರೂ ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡಲೂ ಮಾತಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದರು.
Kannada Bible (KNCL) BSI 2016
ಸೈಪ್ರಸ್ ಮತ್ತು ಸಿರೇನಿನ ಕೆಲವು ಭಕ್ತರಾದರೋ ಅಂತಿಯೋಕ್ಯಕ್ಕೆ ಹೋಗಿ ಪ್ರಭು ಯೇಸುವಿನ ಶುಭಸಂದೇಶವನ್ನು ಗ್ರೀಕರಿಗೂ ಸಾರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರಲ್ಲಿ, ಕೆಲವರು ಅಂದರೆ ಸೈಪ್ರಸ್ ಮತ್ತು ಕುರೇನೆದ ಪುರುಷರು ಅಂತಿಯೋಕ್ಯಕ್ಕೆ ಹೋಗಿ ಗ್ರೀಕರಿಗೂ ಕರ್ತ ಯೇಸುವಿನ ಶುಭಸಮಾಚಾರ ಸಾರಲು ಪ್ರಾರಂಭಿಸಿದರು.