Acts 11:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು. (Verses 23-24)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.
Kannada BSI Bible 2016
ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.
Kannada Bible (KNCL) BSI 2016
ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.